ಬೆಂಗಳೂರು : ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ನಿರೀಕ್ಷೆ ಮಾಡಿದ್ದೆ. ದೂರು ನೀಡಿದ ದಿನವೇ ನನಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದರು. ನನ್ನ ವಿರುದ್ಧ ದೊಡ್ಡ ಷಡ್ಯಂತರ ಮಾಡುತ್ತಿದ್ದಾರೆ. ದೊಡ್ಡ ಷಡ್ಯಂತರದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹಾಗಾಗಿ ಪ್ರಾಜಿಕ್ಯೂಷನ್ ಗ್ರೂಪ್ ಅನುಮತಿ ನೀಡಿದನು ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇನೆ ಎಂದರು.
ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜಿಲ್ಲೆ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಇಷ್ಟೆಲ್ಲಾ ಅದು ಇದ್ದರೂ ನನ್ನ ವಿರುದ್ಧ ರಾಜ ಟ್ಯೂಷನ್ ಗೆ ಅನುಮತಿ ಕೋರಿ ದೂರು ಸಲ್ಲಿಸಲಾಗಿತ್ತು ಅವರೆಲ್ಲರನ್ನೂ ಬಿಟ್ಟು ನನ್ನ ವಿರುದ್ಧ ಏಕೆ ಅನುಮತಿ ಕೊಟ್ಟಿದ್ದಾರೆ? ನನ್ನ ವಿರುದ್ಧ ದೊಡ್ಡ ಷಡ್ಯಂತರ ಮಾಡುತ್ತಿದ್ದಾರೆ. ಷಡ್ಯಂತರದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹೈಕಮಾಂಡ್ ಸಚಿವರು ಶಾಸಕರು ಎಲ್ಲರೂ ನನ್ನ ಬೆಂಬಲಕ್ಕೆ ಇದ್ದಾರೆ ಎಂದರು.