ಬೆಂಗಳೂರು: ನಾವು ನಿರೀಕ್ಷೆ ಮಾಡಿದ್ವಿ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಮ್ಮ ವಿರುದ್ಧದ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ನಾವು ನಿರೀಕ್ಷೆ ಮಾಡಿದ್ದೆವು. ದೂರು ನೀಡಿದ ದಿನವೇ ನನ್ನ ಶೋಕಾಸ್ ನೋಟಿಸ್ ಕೊಟ್ರು ಎಂಬುದಾಗಿ ಹೇಳಿದರು.
ನಾವು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮೊಟ್ಟೆ ಕದ್ದ ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದೆವು. ಆಗ ನೀಡಲಿಲ್ಲ. ಅವರೆಲ್ಲರನ್ನು ಬಿಟ್ಟು ನನಗೆ ನೋಟಿಸ್ ನೀಡಿದ್ದಾರೆ. ಇದರಿಂದಲೇ ಗೊತ್ತಾಗುತ್ತಿದೆ ಷಡ್ಯಂತ್ರ ನಡೆಯುತ್ತಿರುವುದು ಎಂದರು.
ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರವಾದದ್ದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ದೊಡ್ಡ ಷಡ್ಯಂತ್ರದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಹೈಕಮಾಂಡ್, ಸಚಿವರು, ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುತ್ತದೆ. ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವಂತ ಷಡ್ಯಂತ್ರವನ್ನು ಜೆಡಿಎಸ್, ಬಿಜೆಪಿಯವರು ಮಾಡುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದರು.
ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ