ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ ಮೊದಲ ಬೇಡಿಕೆಯಾದಂತ 7ನೇ ವೇತನ ಆಯೋಗದಂತೆ ವೇತನ ಜಾರಿಯಾಗಿದೆ. ಇನ್ನೊಂದು ಬೇಡಿಕೆ ಅಂದ್ರೆ ಅದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದೇ ಆಗಿದೆ. ಈ ಬಗ್ಗೆಯೂ ಸಿಎಂ ಸಿದ್ಧರಾಮಯ್ಯ ಪಾಸಿಟಿವ್ ಭರವಸೆ ನೀಡಿದ್ದಾರೆ. ಶೀಘ್ರವೇ ಓಪಿಎಸ್ ಜಾರಿಗೊಳಿಸುವ ಬಗ್ಗೆ ಕ್ರಮ ವಹಿಸುವುದಾಗಿ ಹೇಳಿ, ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ರೆಡಿಯಾಗಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಯ ಕಾರಣ ಸಿಎಂ ಸಿದ್ಧರಾಮಯ್ಯ ಅವರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರಿ ನೌಕರರ ಒಪಿಎಸ್ ಹಾಗೂ ಆರೋಗ್ಯ ಸಂಜೀವಿನಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಸರ್ಕಾರಿ ನೌಕರರ ಒಳಿತಾಗುವಂತ ಕೆಲಸ ಮಾಡಲಿದೆ. ರಾಜ್ಯ ಸರ್ಕಾರಿ ನೌಕರರ ಜೊತೆಗೆ ಸರ್ಕಾರವಿದೆ. ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದರು.
ಬೆಂಗಳೂರು ಜನತೆ ಗಮನಕ್ಕೆ: ಆ.18ರ ನಾಳೆ, ಆ.19ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ