ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಕ್ರೀಪ್ ರೈಟರ್ ಆಗಿದ್ದಾರೆ.ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಆಕ್ಟರ್ ಆಗಿದ್ದು ಕೇಂದ್ರ ಸರ್ಕಾರದ ಕೈಗೊಂಬೆ ಆಗಿದ್ದಾರೆ.ಅವರು ಹೇಳಿದಂತೆ ಇವರು ನಡೆದುಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ನಾವೆಲ್ಲರೂ ಸಿಎಂ ಜೊತೆ ಇದ್ದೇವೆ. ಇದೊಂದು ರಾಜಕೀಯ ದುರುದ್ದೇಶ ಹುನ್ನಾರವಾಗಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ಯಾವ ಅಧಿಕಾರಿಗಳು ಪ್ರಾಜಿಕ್ಯೂಷನ್ ಗೆ ಅನುಮತಿ ಕೇಳಿಲ್ಲ. ಸಿದ್ದರಾಮಯ್ಯನವರು ಕಾನೂನು ಹೋರಾಟ ಮಾಡುತ್ತಾರೆ. ನಾವೆಲ್ಲರೂ ಸಿಎಂ ಜೊತೆಗೆ ಇದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.