ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಗೆ ಸಲ್ಲಿಸಬಹುದು.
BREAKING :ಇದು ರಾಜಕೀಯ ಪ್ರೇರಿತ ದೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ `DCM’ ಡಿಕೆಶಿ ಗುಡುಗು
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ