ಬೆಂಗಳೂರು: ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ಬೃಹತ್ ಐಫೋನ್ ತಯಾರಿಕಾ ಘಟಕ ಸ್ಥಾಪಿಸುತ್ತಿರುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಜೊತೆಗೆ ಎಲ್ಲ ನೆರವನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಫಾಕ್ಸ್‌ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು, ರಾಜ್ಯದಲ್ಲಿ ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿರುವ ಘಟಕವು ಚೀನಾದ ನಂತರದ ಎರಡನೇ ಬೃಹತ್ ಘಟಕವಾಗಿದೆ.
ಇಲ್ಲಿ 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ. ನಮ್ಮ ಹೂಡಿಕೆ ಇಷ್ಟಕ್ಕೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಪರಸ್ಪರ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.
ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.
ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಹಾಜರಿದ್ದರು.
ಫಾಕ್ಸ್ ಕಾನ್ ಕಂಪನಿಯು ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಲಿಯು ಇಲ್ಲಿಗೆ ಭೇಟಿ ನೀಡಿದ್ದಾರೆ.
ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ಬೃಹತ್ ಐಫೋನ್ ತಯಾರಿಕಾ ಘಟಕ ಸ್ಥಾಪಿಸುತ್ತಿರುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಜೊತೆಗೆ ಎಲ್ಲ ನೆರವನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಫಾಕ್ಸ್‌ಕಾನ್ ಕಂಪನಿಯ ಸಿಇಒ… pic.twitter.com/0Yf8Olclg9
— DIPR Karnataka (@KarnatakaVarthe) August 17, 2024
ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ