ಬೆಂಗಳೂರು: ಕಳೆದ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆಯನ್ನು ನೀಡಲಾಗಿತ್ತು. ಈ ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಅದಕ್ಕೆ ರಾಜ್ಯಪಾಲರು ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಅಧಿಕೃತವಾಗಿ ಕರ್ನಾಟಕ ಗೆಜೆಟ್ ನಲ್ಲಿ ಬದಲಾದಂತ ನಿಯಮವಾಳಿಗಳನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರು ಗೆಜೆಟ್ ಅಧಿಸೂಚನೆಯಲ್ಲಿ ಮಾಹಿತಿ ನೀಡಿದ್ದು, The Kannada Language Comprehensive Development Act, 2022 (Karnataka Act No. 13 of 2023)ರ ಪಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Second Amendment) Act, 2024 (Karnataka Act No. 38 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದಿದ್ದಾರೆ.
ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಅಧಿನಿಯಮ, 2024 (2024 ರ ಆಗಸ್ಟ್ ತಿಂಗಳ 15 ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.
ಇಲ್ಲಿ ಇನ್ನುಮುಂದ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;
ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-
1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ. (1) ಈ ಅಧಿನಿಯಮವನ್ನು ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.
2. 7ನೇ ಪ್ರಕರಣದ ತಿದ್ದುಪಡಿ, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 7ನೇ ಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“7. ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.- (1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅವರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳನ್ನು ನೇಮಿಸತಕ್ಕದ್ದು.
(2) ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯು ರಾಜ್ಯದಲ್ಲಿ ಮುಖ್ಯ ಕಂದಾಯ ಅಧಿಕಾರಿಯಾಗಿರತಕ್ಕದ್ದು ಮತ್ತು ಆತನಿಗೆ ಅಧೀನದಲ್ಲಿರುವ ಇಡೀ ರಾಜ್ಯದಲ್ಲಿನ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು.
(3) ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರಡಿಯಲ್ಲಿ ಆತನಿಗೆ ಪದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು, ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಅಥವಾ ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು, 1977ರ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪುದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ”
3. 7ಎ ಮತ್ತು 7ಬಿ ಹೊಸ ಪಕರಣಗಳ ಸೇರ್ಪಡೆ.- ಮೂಲ ಅಧಿನಿಯಮದಲ್ಲಿ ಹಾಗೆ ಸೇರಿಸಲಾದ 7ನೇ ಪುಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-
“7ಎ. ಕಂದಾಯ ಕಮೀಷನರ್ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.- (1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಕಂದಾಯ ಕಮೀಷನರ್‌ನನ್ನು ನೇಮಿಸತಕ್ಕದ್ದು, ಆತನು ಅವರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗೆ ಅಧೀನನಾಗಿರತಕ್ಕದ್ದು,
(2) ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟು ಕಂದಾಯ ಕಮೀಷನರ್‌ನು ಆತನಿಗೆ ಅಧೀನದಲ್ಲಿರುವ ಇಡೀ ರಾಜ್ಯದಲ್ಲಿನ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು.
(3) ಕಂದಾಯ ಕಮೀಷನರ್‌ನು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಡಿ ಆತನಿಗೆ ಪ್ರದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು, ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪುದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.
7ಬಿ. ರೀಜನಲ್ ಕಮೀಷನರ್‌ನ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.- (1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ, ಪ್ರತಿ ವಿಭಾಗಕ್ಕೂ ಅಪರ ಮುಖ್ಯ ಕಾರ್ಯದರ್ಶಿ/ಪುಧಾನ ಕಾರ್ಯದರ್ಶಿ/ ಕಾರ್ಯದರ್ಶಿಗೆ ಅಧೀನವಾದ ರೀಜನಲ್ ಕಮೀಷನರ್ ನನ್ನು ನೇಮಿಸತಕ್ಕದ್ದು.
(2) ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟು, ಪ್ರಾದೇಶಿಕ ಕಮೀಷನರ್‌ನು ಕಂದಾಯ ವಿಭಾಗದ ಮುಖ್ಯ ಕಂದಾಯ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಭಾಗದೊಳಗಿನ ತನಗೆ ಅಧೀನರಾದ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು
(3) ಪ್ರಾದೇಶಿಕ ಕಮೀಷನರ್‌ನು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಡಿ ಆತನಿಗೆ ಪ್ರದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.”
4. 8ನೇ ಪ್ರಕರಣದ ತಿದ್ದುಪಡಿ, ಮೂಲ ಅಧಿನಿಯಮದ 8ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ “ಅವನು ರೀಜನಲ್ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು” ಎಂಬ ಪದಗಳ ಬದಲಿಗೆ “ಅವನು ಕಂದಾಯ ಕಮೀಷನರ್‌ಗೆ ಮತ್ತು ವಿಭಾಗದ ರೀಜನಲ್ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
5, 9ನೇ ಪ್ರಕರಣದ ತಿದ್ದುಪಡಿ. ಮೂಲ ಅಧಿನಿಯಮದ 9ನೇ ಪ್ರಕರಣದ (3)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“(3) ಉಪ-ಪ್ರಕರಣ (1)ರಡಿಯಲ್ಲಿ ನೇಮಕಗೊಂಡ ವಿಶೇಷ ಡೆಪ್ಯೂಟಿ ಕಮೀಷನರ್‌ನು ಕಂದಾಯ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು. ರಾಜ್ಯ ಸರ್ಕಾರವು ಸಾಮಾನ್ಯ ಅಥವಾ ವಿಶೇಷ ಆದೇಶದ ಮೂಲಕ ಈ ಪರವಾಗಿ ನಿರ್ದಿಷ್ಟಪಡಿಸಬಹುದಾದಂಥ ವಿಷಯಗಳನ್ನು ಹೊರತುಪಡಿಸಿ, ಆತನು ವಿಭಾಗದ ರೀಜನಲ್ ಕಮೀಷನರ್‌ಗೂ ಸಹ ಅಧೀನನಾಗಿರತಕ್ಕದ್ದು.
6. 10ನೇ ಪ್ರಕರಣದ ತಿದ್ದುಪಡಿ. ಮೂಲ ಅಧಿನಿಯಮದ 10ನೇ ಪ್ರಕರಣದ (1)ನೇ ಉಪಪಕರಣದಲ್ಲಿ “ಅಧೀನರಾಗಿರತಕ್ಕದ್ದು” ಎಂಬ ಪದಗಳಿಗೆ ಮೊದಲು “ಕಂದಾಯ ಕಮೀಷನರ್ ಗೆ” ಎಂಬ ಪದಗಳನ್ನು ಸೇರಿಸತಕ್ಕದ್ದು ಎಂದಿದ್ದಾರೆ.
ಉಪ್ಪಾರ ಸಮುದಾಯದವರಿಗೆ ಗುಡ್ ನ್ಯೂಸ್: ಸಹಾಯಧನ-ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ