ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ PSI ಪರಶುರಾಮ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು CID ಗೆ ವಹಿಸಿ ಅದೇಶಿಸಿತ್ತು. ಇದೀಗ ತನಿಖೆ ಚುರುಕುಗೊಳಿಸಿದ CID ತಂಡ ಯಾದಗಿರಿಗೆ ಎಂಟ್ರಿ ಕೊಟ್ಟಿದೆ.
ಹೌದು ಪಿಎಸ್ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ.
ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ ಕೊಣೆ ಪರಿಶೀಲನೆ ಮಾಡಿದ್ದಾರೆ. ನಂತರ ಎಸ್ಪಿ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಸಾಯುವ ಮುನ್ನ ಪರಶುರಾಮ ಯಾರನ್ನು ಭೇಟಿ ಮಾಡಿದ್ದರು ಎಂಬ ಹಲವು ವಿಚಾರಗಳ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಹಾಗೂ ಯಾದಗಿರಿ ಪೊಲೀಸ್ ಅಧಿಕಾರಿಗಳಿಂದ ಎಡಿಜಿಪಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.
ಇನ್ನು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪ ಹೊತ್ತಿರುವ ಕಾಂಗ್ರೆಸ್ ಶಾಸಕರಾದ ಚೆನ್ನರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪನಗೌಡ ನನ್ನ ಪತಿಗೆ ಸಾವಿಗೆ ಇವರೆ ಕಾರಣ ಎಂದು ದೂರು ಸಲ್ಲಿಸಿದ್ದಾರೆ.ಕೇಸ್ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆ ಆಗಿರುವ ತಂದೆ ಮಗ ಪತ್ತೆ ಆಗಿಲ್ಲ.