ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಹಾಗೂ ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಜವಾಹರ ನವೋದಯ ಪ್ರವೇಶ ಪರೀಕ್ಷೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು ನಡೆಯಲಿದ್ದು, ಆಸಕ್ತರಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ರ ಮೂಲಕ ಸೆಪ್ಟಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ