ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್, 31 ರವರೆಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಆಗಸ್ಟ್, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ದೀಕ್ಷಾಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಆಗಸ್ಟ್ 31 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು.
ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಯಾತ್ರಾರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿ ಪಡಿಸಿದ ಗುರಿಗಳಿಗಿಂತ ಹೆಚ್ಚಿನ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಯಾತ್ರಾರ್ಥಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್‍ಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಅಪ್‍ಲೋಡ್ ಮಾಡುವುದು. ಯಾತ್ರಾರ್ಥಿಗಳು ಎಸ್‍ಸಿ/ ಎಸ್‍ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
ಆಯ್ಕೆಯಾದ ಯಾತ್ರಾರ್ಥಿಗಳು ಒಂದುವೇಳೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿದ್ದಲ್ಲಿ ಈ ಪ್ರಯಾಣ ಕೈಗೊಂಡಂತೆ ಧೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್, ಡೀಸಲ್ ಬಿಲ್ಲುಗಳನ್ನು ಸಹ ಸಲ್ಲಿಸತಕ್ಕದ್ದು ಹಾಗೂ ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿಗಳನ್ನು ಸಲ್ಲಿಸುವುದು.
ಡಾ.ಬಿ.ಆರ್ ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು. ಯಾತ್ರಾರ್ಥಿಗಳು ತಮ್ಮ ಹೆಸರಿನಲ್ಲಿರುವ ಉಳಿತಾಯ ಖಾತೆಯ ಸಂಖ್ಯೆ ಬ್ಯಾಂಕಿನ ಹೆಸರು, ವಿಳಾಸ ಮತ್ತು ಐಎಫ್‍ಎಸ್‍ಸಿ ಕೋಡ್ ಅನ್ನು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ಭರ್ತಿ ಮಾಡತಕ್ಕದ್ದು.
ಹೆಚ್ಚಿನ ಮಾಹಿತಿಗೆ ಆಯಾ ಪ್ರಾದೇಶಿಕ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ, ಮಾಹಿತಿಯನ್ನು ಪಡೆಯಬಹುದಾಗಿದೆ.
ಫಾಕ್ಸ್ ಕಾನ್ ನಿಂದ ರಾಜ್ಯದಲ್ಲಿ 2ನೇ ಬೃಹತ್ iPhone ತಯಾರಿಕಾ ಘಟಕ ಆರಂಭ: 40 ಸಾವಿರ ಉದ್ಯೋಗ ಸೃಷ್ಠಿ