ಗದಗ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಗೆ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗದಗ ಜಿಲ್ಎಲಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಾವೇರಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55) ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಹಾಗೂ ಮಗ ವಿಜಯ್ (12) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.