ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಹೆಚ್ ಎಸ್ ಆರ್ ಲೇಔಟ್ ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು, ಸದ್ಯ ಯುವತಿಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋರಮಂಗಲದ ಪಬ್ ಗೆ ಹೋಗಿದ್ದ ಯುವತಿ ಅಪಘಾತವಾಗಿದೆ. ಬಳಿಕ ಆಟೋದಲ್ಲಿ ಹೋಗುತ್ತಿದ್ದ ವೇಳೆ ಎರಡರಿಂದ ಮೂವರು ಕಾಮುಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.