ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ದೃಢ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ಬಳಿಯ ಗೋಡೌನ್ ಇರುವ ಜಾಗದಲ್ಲಿ ಅತ್ಯಾಚಾರ ನಡೆದಿದೆ. ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದ ಯುವತಿಯನ್ನು ಸ್ನೇಹಿತಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.
ಸದ್ಯ ಯುವತಿಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರಮಂಗಲದ ಪಬ್ ಗೆ ಹೋಗಿದ್ದ ಯುವತಿ ಅಪಘಾತವಾಗಿದೆ. ಬಳಿಕ ಆಟೋದಲ್ಲಿ ಹೋಗುತ್ತಿದ್ದ ವೇಳೆ ಎರಡರಿಂದ ಕಾಮುಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ..
ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ನಿಜ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.