ಬೆಂಗಳೂರು : ರಾಜ್ಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಹಿರಿಯ ವಕೀಲರೊಂದಿಗೆ ಮಹತ್ವದ ಸಭೆ ನಡೆಸಿದ್ದು, ಪ್ರಾಸಿಕ್ಯೂಷನ್ ನೀಡಿರುವ ಕುರಿತು ಕಾನುನು ಹೋರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಲು ಮುಂದಾಗಿದ್ದು, ಸಭೆಯಲ್ಲಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ವಕೀಲರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.