ವಿಜಯನಗರ: ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಹಸುಗೂಸು ಒಂದು ಮೃತಪಟ್ಟ ಆರೋಪ ಕೇಳಿ ಬಂದಿದೆ. ಹೀಗಾಗಿ ಆಸ್ಪತ್ರೆಯ ಮುಂದೆ ಕುಟುಂಬಸ್ಥರು, ಸಂಬಂಧಿಕರು ಸೂಕ್ತ ಕಾನೂನು ಕ್ರಮ, ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿದೆ. ಆಗಸ್ಟ್.16ರಂದು ಅಂಕಲಮ್ಮ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆಯಲ್ಲಿ ಮಾರ್ಗ ಮಧ್ಯೆಯೇ ಹೆರಿಗೆ ಆಗಿತ್ತು.
ದಾರಿಯ ಮಾರ್ಗ ಮಧ್ಯೆಯೇ ಹೆರಿಗೆಯಾಗಿದ್ದಂತ ಅಂಕಲಮ್ಮ ಹಾಗೂ ಹಸುಗೂಸನ್ನು ಹೊಸಪೇಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿತ್ತು.
ಅಂಕಲಮ್ಮ ಮತ್ತು ತಾಯಪ್ಪ ಅವರ ದಂಪತಿಯ ಹಸುಗೂಸಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಬಳಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!