ನವದೆಹಲಿ: ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಭಾನುವಾರ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.
ಕೊಲ್ಕತ್ತಾದಲ್ಲಿನ ಅರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಂತ ವೈದ್ಯೆಯ ಮೇಲೆಯೇ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಇಡೀ ದೇಶವೇ ಈ ಘಟನೆಯನ್ನು ಖಂಡಿಸಿತ್ತು. ಅಲ್ಲದೇ ಭಾರತೀಯ ವೈದ್ಯಕೀಯ ಸಂಘವು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು.
ಈ ಬೆನ್ನಲ್ಲೇ ಕೊಲ್ಕತ್ತಾ ವೈದ್ಯಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಮ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೇ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.
BIG NEWS: ತುಂಗಭದ್ರಾ ಡ್ಯಾಂ ಸ್ಟಾಪ್ ಗೇಟ್ ಅಳವಡಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ನಗದು ನೀಡಿ ಸನ್ಮಾನ
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!