ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.
ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅವರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.
ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17-ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ವಕೀಲರು ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂನೂನು ಹೋರಾಟಕ್ಕೆ ಮುಂದಾಗಿದ್ದಾರೆ.