ಬೆಂಗಳೂರು: ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಿಸಿದ್ದು, ಇದರಿಂದಾಗಿ 20ಕ್ಕೂ ಅಧಿಕ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗೂರಿನಲ್ಲಿ ನಡೆದಿದೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡುತ್ತಿದ್ದ ಸುಮಾರು 20 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸ್ಟೆಲ್ ನ ಊಟದ ಕೋಣೆಗೆ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಿಸಿದ್ದಾರೆ. ಈ ಕೋಣೆಯಲ್ಲಿ ವಿದ್ಯಾರ್ಥಿಗಳು ಕುಳಿತು ಊಟ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.