ಬೆಂಗಳೂರು : ಬೆಂಗಳೂರಿನ ಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ ಎಸ್ ಆರ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೊರಿಯೋಗ್ರಾಫರ್ ಆಗಿರುವ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿಸಲಾಗಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 17 ರ ಮಧ್ಯರಾತ್ರಿ ಘಟನೆ ನಡೆದಿದೆ. ವಾರಾಂತ್ಯ ಸ್ನೇಹಿತರೊಂದಿಗೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ಯುವತಿಯನ್ನು ಬೈಕ್ ನಲ್ಲಿ ಡ್ರಾಪ್ ಕೊಡಲು ಕರೆದುಕೊಂಡು ಹೋಗಿ ರೇಪ್ ಮಾಡಲಾಗಿತ್ತು.