ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ಪ್ರಾಸಿಕ್ಯೂಷನ್ ಗೆ ಬೆಂಬಲಿಸುತ್ತೇನೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಆ ಕಾಲದ ರಾಜ್ಯಪಾಲರು ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರಕ್ಕೆ ಹೊಣೆಗಾರರನ್ನಾಗಿ ಮಾಡಿದ್ದನ್ನು ಸಮರ್ಥಿಸಿಕೊಂಡಂತೆ, ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕರ್ನಾಟಕದ ರಾಜ್ಯಪಾಲ ಗೆಹ್ಲೋಟ್ ಅವರ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಭ್ರಷ್ಟಾಚಾರವು ಒಂದು ವ್ಯವಸ್ಥಿತ ರೋಗವಾಗಿದ್ದು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.