ಬೆಂಗಳೂರು: ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಹಿಂದುಳಿದ ನಾಯಕ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಬಿಜೆಪಿಯಿಂದ ಷಡ್ಯಂತ್ರ ನಡೆಯುತ್ತಿದೆ. ಸಿಎಂ ವಿರುದ್ಧ ಸಂವಿಧಾನದ ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.