ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಇದೀಗ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದು, ಇದರ ವಿರುದ್ಧ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆಯೆ ಕಾಂಗ್ರೆಸ್ ಕಾರ್ಯಕರ್ತ ನಿಗೆ ಹೃದಯಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಐ ಸುದ್ದಿಗೋಷ್ಠಿ ನಡೆಯುತ್ತಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಘಾತ ಸಂಭವಿಸಿದ್ದು, ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆ ಸಿಕೆ ರವಿಚಂದ್ರನ್ ಎನ್ನುವ ಕಾರ್ಯಕರ್ತನಿಗೆ ಹರದೆಯಾಘಾತವಾಗಿದೆ. ಕೂಡಲೇ ಕಾಂಗ್ರೆಸ್ ಕಾರ್ಯಕರ್ತ ಸಿಕೆ ರವಿಚಂದ್ರನ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಾಧ್ಯ ಸಾವನಪ್ಪಿದ್ದಾನೆ.