ಬೆಂಗಳೂರು: ಇಂದು ನಗರದ ಮೆಜೆಸ್ಟಿಕ್ ಬಳಿಯ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಆಯ ತಪ್ಪಿ ರೈಲು ಹಳಿಗಳ ಮೇಲೆ ಬಿದ್ದಿದ್ದನು. ಕೂಡಲೇ ತುರ್ತು ಸಂದೇಶದ ಬಟನ್ ಒತ್ತಿ, ರೈಲು ಹಳಿಗಳಲ್ಲಿನ ವಿದ್ಯುತ್ ಸ್ಥಗಿತಗೊಳಿಸಿ ಪ್ರಾಣಾಪಾಯದಿಂದ ಪಾರು ಮಾಡುವಂತೆ ಮಾಡಲಾಗಿತ್ತು. ಹಾಗಾದ್ರೇ ಇದರ ಬಗ್ಗೆ ಬಿಎಂಆರ್ ಸಿಎಲ್ ಸಂಪೂರ್ಣ ಮಾಹಿತಿ ಮುಂದೆ ಓದಿ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಜಯನಗರದಿಂದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ (ಅಂಧರು) ಇಬ್ಬರು ಆಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದಾರೆ ಎಂದಿದೆ.
ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಂ ಕಾರ್ಯಾಚರಣೆ ನಡೆಸಿ ಸಹ ಪ್ರಯಾಣಿಕರ ನೆರವಿನಿಂದ ರಕ್ಷಿಸಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ದೃಢಪಟ್ಟಿದೆ. ಮಧ್ಯಾಹ್ನ ಗಂಟೆ 1.26 ಕ್ಕೆ ಎಂದಿನಂತೆ ರೈಲು ಕಾರ್ಯಾಚರಣೆಯನ್ನು ಪುನರಾರಂಭಿಸಲಾಯಿತು ಎಂದು ತಿಳಿಸಿದೆ.
ಬೆಂಗಳೂರು ಜನತೆ ಗಮನಕ್ಕೆ: ಆ.20ರ ನಾಳೆ, ಆ.21ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!