ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರ ಗೌಡ ಜಾಮೀನು ಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯವು ಆಗಸ್ಟ್ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡುವರೆ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಇದ್ದಾರೆ. ಇಂದು ಜಾಮೀನಿಗಾಗಿ ಪವಿತ್ರ ಗೌಡ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆಗಸ್ಟ್ 22ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು.ವಿಚಾರಣೆಯ ಸಂದರ್ಭದಲ್ಲಿ ಸಿಸಿಹೆಚ್ 57 ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿತು. ಇದೆ ವೇಳೆ ಮತ್ತೊಬ್ಬ ಆರೋಪಿ ಅನು ಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾನೆ.
ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ ನಲ್ಲಿ ಭೀಕರವಾಗಿ ನಟ ದರ್ಶನ್ ಹಾಗೂ ಆತನ ಸಹಚರರು ಹಲ್ಲೆ ಮಾಡಿ ನಂತರ ಕಾಲುವೆಯೊಂದರ ಬಳಿ ಶವ ಎಸೆದಿದ್ದರು. ಇದಾದ ಬಳಿಕ ಪೊಲೀಸರು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಬಂಧಿಸಿದ್ದರು.ಇದೀಗ ತನಿಖೆಯ ಅಂತಿಮ ಘಟ್ಟಕ್ಕೆ ತಲುಪಿದ್ದು, SIT ಅಧಿಕಾರಿಗಳು ಹಾಗೂ ಎಫ್ ಎಸ ಎಲ್ ವರದಿ ಹಾಗೂ ಪೊಲೀಸರು ಸಂಗ್ರಹಿಸಿರುವ ಸಾಕ್ಷಿಗಳನ್ನು ಆಧರಿಸಿ ಶೀಘ್ರದಲ್ಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.