ಶಿವಮೊಗ್ಗ: ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜ್ಯಪಾಲರಿಗೆ ಧಿಕ್ಕಾರ, ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ರಾಜ್ಯಪಾಲರಿಗೆ ಗೌರವ ತರಲ್ಲ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿದ್ದಾರೆ. ಅವರಿಗೆ ಧಿಕ್ಕಾರವನ್ನು ಕೂಗಿ ಆಕ್ರೋಶ ಹೊರ ಹಾಕಿದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿತ್ತು. ಆದರೇ ಈವರೆಗೆ ಕೊಟ್ಟಿಲ್ಲ. ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಲು ನಿಮಗೆ ಹಕ್ಕಿಲ್ಲ. ರಾಜ್ಯಪಾಲರೇ ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಗರಂ ಆದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!
SHOCKING : ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆ ‘ಹೃದಯಾಘಾತದಿಂದ’ ಕಾಂಗ್ರೆಸ್ ಕಾರ್ಯಕರ್ತ ಸಾವು!