ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರವಾಗಿ ಸಚಿವ ಸಂತೋಷ್ ಲಾಡ್, ಪ್ರಧಾನಿ ವಿರುದ್ಧ ರಾಷ್ಟ್ರಪತಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಆಕ್ರೋಶ ಹೊರ ಹಾಕಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪೊಲಿಟಿಕಲ್ ಟೂಲ್ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಅವಕಾಶವೇ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ 40 ವರ್ಷದ ಹಾದಿಯಲ್ಲಿ ಯಾವುದೇ ಕಪ್ಪು ಚುಕ್ಕೆ. ಇಲ್ಲ ಯಾವ ಆಧಾರದ ಮೇಲೆ ಸಿಎಂ ರಾಜೀನಾಮೆ ಕೊಡಬೇಕು? ಪ್ರಧಾನಿ ವಿರುದ್ಧ ರಾಷ್ಟ್ರಪತಿ ಪ್ರಾವಿಷನ್ ಗೆ ಕೊಟ್ಟರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುತ್ತಾರಾ ಎಂದು ಇದೆ ವೇಳೆ ಪ್ರಶ್ನಿಸಿದರು.
ಎಲ್ಲದಕ್ಕೂ ಒಂದು ನಿಯಮ ಅಂತ ಇದೆ. ಪ್ರಾಸಿಕ್ಯೂಷನ್ ಗೆ ಕೊಡಲು ಕೇಂದ್ರದ ಮಾರ್ಗಸೂಚಿ ಇದೆ. ಸಿದ್ದರಾಮಯ್ಯ ಭಾಗಿಯಾದ ಬಗ್ಗೆ ದಾಖಲೆ ಇದೆಯಾ? ರಾಜೀನಾಮೆ ಕೇಳಲು ಸಾಕ್ಷಿ ಇಲ್ಲ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ರಾಜ್ಯಪಾಲ ಹಾಗೂ ಬಿಜೆಪಿ ವಾಗ್ದಾಳಿ ನಡೆಸಿದರು.