ಬೆಂಗಳೂರು: 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ JEE/NEET ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಮೂಲಕ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ DO:25.08.2024 ಸಂಜೆ 5:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅನ್ನು ನೋಡಲು ತಿಳಿಸಿದ್ದಾರೆ.
ವಿಶೇಷ ಸೂಚನೆ:-
ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಿಸಿದಂತೆ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳನ್ನು ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ಮಾತ್ರ ನೀಡಲಿದ್ದು, ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ಕಾಲಕಾಲಕ್ಕೆ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್‌ರೂಂ (ಆಫ್‌ಲೈನ್) ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಸೂಚನೆಗಳು:
ಭಾರತದ ಪುಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
> ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಯ ಜಾತಿಗೆ ಸೇರಿರಬೇಕು.
> ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.6.00 ಲಕ್ಷಗಳು.
> ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಹೆಸರಿನಲ್ಲಿಯೇ ಇರಬೇಕು.
> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ/10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
> ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು, ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪುಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25.08.2024ರ ಸಂಜೆ 5:00 ಗಂಟೆ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ:
8050770004 (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಕರೆ ಮಾಡುವಂತೆ ತಿಳಿಸಿದ್ದಾರೆ.
ಸಿಎಂ ವಿರುದ್ಧದ ಮುಡಾ ಕೇಸ್: ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ: ಸಿದ್ಧರಾಮಯ್ಯ
ರಾಜ್ಯಪಾಲರ ಪ್ರತಿಕೃತಿ ದಹನ, ನಿಂದನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಖಂಡನೆ
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!