ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಯಾದ ಶಕ್ತಿ ಯೋಜನೆಯಡಿ ಈವರೆಗೆ 271,28 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ನಂತರ ಈವರೆಗೆ 6,555 ಕೋಟಿ ರೂ. ವೆಚ್ಚವಾಗಿದ್ದು, ಒಟ್ಟಾರೆಯಾಗಿ ರಾಜ್ಯಾದ್ಯಂತ 271.28 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
2023 ರ ಜೂ. 11 ರಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಾಗಿತ್ತು.