ಬೆಂಗಳೂರು : ರಾಜ್ಯ ಸರ್ಕಾರವು ಪಿಯುಸಿ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.09.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.09.2024
ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: https://ssp.postmatric.karnataka.gov.in/
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ 2 https://bcwd.karnataka.gov.in ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ:
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005
ಇಮೇಲ್: bcwdhelpline@gmail.com
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in
ದೂರವಾಣಿ ಸಂಖ್ಯೆ: 1902