ಬೆಂಗಳೂರು : ಈಗಾಗಲೇ 2.68 ಕೋಟಿಗೂ ಹೆಚ್ಚು ರೈತರ ಆಧಾರ್ ಸೀಡಿಂಗ್ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್ ಕೆಲಸವನ್ನು ಸಂಪೂರ್ಣಗೊಳಿಸಲು ಸೂಚಿಸಲಾಗಿದೆ.
ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್ ಜೊತೆಗೆ ಆರ್ಟಿಸಿ ಲಿಂಕ್ ಮಾಡಲಾಗಿದೆ. ಶೇ.65 ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ ಶೇ.90 ರಷ್ಟು ಕೆಲಸ ಮುಗಿಸುವ ಗುರಿ ಹೊಂದಲಾಗಿದೆ” ಎಂದರು.
, “ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ರೂ ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್ ಸೀಡಿಂಗ್ನಿಂದ ತಿಳಿದುಬಂದಿದೆ. ಹೀಗಾಗಿ ಎರಡು ತಿಂಗಳ ನಂತರ ಅಧಾಲತ್ ಮೂಲಕ ಫೌತಿಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ.
ಅಲ್ಲದೆ, ಆಧಾರ್ ಸೀಡಿಂಗ್ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು, ಬಿಟ್ಟುಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ, ಒತ್ತುವರಿಯಾದದ್ದೂ ಗೊತ್ತಾಗಿದೆ. ಜಮೀನಿಗೆ ಆಧಾರ್ ಲಿಂಕ್ ಮಾಡುವಾಗ 2.20 ಲಕ್ಷ ಜಮೀನು ಸರ್ಕಾರಿ ಭೂಮಿ ಎಂದು ಗುರುತಿಸದ ಭೂಮಿ ಇವೆ ಎಂದು ತಿಳಿದುಬಂದಿದೆ. ಆಧಾರ್ ಸೀಡಿಂಗ್ ಮುಗಿಯುವುದರ ಒಳಗಾಗಿ 3 ರಿಂದ 3.50 ಲಕ್ಷ ಹೆಚ್ಚುವರಿ ಸರ್ಕಾರಿ ಭೂಮಿ ಲೆಕ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ರಾಜ್ಯದಾದ್ಯಂತ 4 ಕೋಟಿಗೂ ಅಧಿಕ ಆರ್ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.75 ಕೋಟಿ ಆರ್ಟಿಸಿಗಳನ್ನು ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಲ್ಲದೆ, 1.20 ಕೋಟಿ ಆರ್ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಕಲಬುರಗಿ ವಿಭಾಗದಲ್ಲಿ 45 ಲಕ್ಷ ಆರ್ಟಿಸಿ ಮಾಲೀಕರಿದ್ದು ಈ ಪೈಕಿ 18 ಲಕ್ಷ ಆರ್ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 40 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ತಾಕೀತು ಮಾಡಿದರು.
ಆರ್ಟಿಸಿಗಳನ್ನು ಆಧಾರ್ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಆಧಾರ್ ಜೋಡಣೆಯಿಂದ ಜನರಿಗೆ ಆಗುವ ಅನುಕೂಲ ಏನು ಎಂಬ ಕುರಿತು ಕ್ಯಾಂಪೇನ್ ಮಾಡಿ, ಇದರಿಂದ ಒಳ್ಳೆಯ ಸರಳ ಆಡಳಿತ ನೀಡಬಹುದು, ಅಧಿಕಾರಿಗಳ ಕೆಲಸದ ಒತ್ತಡವೂ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.