ಬೆಂಗಳೂರು: ನಗರದ ಸಿಲಿಕಾನ್ ಸಿಟಿಯ ಕೇಂದ್ರ ಬಿಂದುವಾಗಿರುವಂತ ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನು ಮರು ನಾಮಕರಣಗೊಳಿಸಲಾಗುತ್ತಿದೆ. ಇನ್ಮುಂದೆ ಎಲೆಕ್ಟ್ರಾನಿಕ್ ಸಿಟಿ ಹೆಸರು ಮರು ನಾಮಕರಣಗೊಳಿಸಲಾಗಿತ್ತು, ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಸಲಾಗಿದೆ.
ಇಂದು ಸಿಎಂ ಸಿದ್ಧರಾಮಯ್ಯ ಈ ಕುರಿತಂತೆ ಮಾತನಾಡಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೆಸರನ್ನು ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರು ನಾಮಕರಣಗೊಳಿಸುತ್ತಿರುವುದಾಗಿ ಘೋಷಿಸಿದರು.
ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು.
ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದು ತಿಳಿಸಿದರು.
ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.
‘ಹಿಂದುಳಿದ’ವರು ಎಂಬ ಕಾರಣಕ್ಕೆ ‘ಸಿದ್ದರಾಮಯ್ಯ’ಗೆ ರಕ್ಷಣಾ ಕವಚವೇ?- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ರಸ್ತೆ ಮಧ್ಯದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ!
BREAKING : ದೇಶವು ಮತ್ತೊಂದು ಅತ್ಯಾಚಾರವನ್ನು ಕಾಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್