ಮಂಡ್ಯ : ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಎಂದರೇ ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಅವರು ಸ್ಮರಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪುರಸಭಾ ಸಿಡಿಎಸ್ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಹಾಗೂ ಉಪ ತಹಶೀಲ್ದಾರ್ ಸೋಮಶೇಖರ್ ಉದ್ಘಾಟಿಸಿ, ಬಳಿಕ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಅರಸು ಅವರು ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ಸಹ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ಶ್ರಮಿಸಿದವರು. ಉಳುವವನೇ ಭೂಮಿಯ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರು ನೀಡಿದ ಕೊಡುಗೆಗಳು ಮಾದರಿಯಾಗಿದ್ದು, ಇಂದಿನ ಯುವ ಜನತೆ ಅವರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಲತಾ ಪ್ರಧಾನ ಭಾಷಣ ಮಾಡಿದರು.
ಇದೇ ವೇಳೆ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಪ ತಹಶೀಲ್ದಾರ್ ಸೋಮಶೇಖರ್, ಸಿಡಿಪಿಓ ನಾರಾಯಣ್, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್, ಕಸಾಪ ಅಧ್ಯಕ್ಷ, ಸುನೀಲ್ ಕುಮಾರ್, ಲಿಂಗಯ್ಯ, ಚನ್ನಸಂದ್ರ ಲಕ್ಷ್ಮಣ್, ವೆಂಕಟಾಚಲಯ್ಯ, ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಮಂಡ್ಯದಲ್ಲಿ ಸಿಡಿದೆದ್ದ ಕೈ ಕಾರ್ಯಕರ್ತರು; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ
‘ಆಯುರ್ವೇದ ವೈದ್ಯ’ರು ‘ನಕಲಿ ವೈದ್ಯ’ರೇ? ಇಲ್ಲಿದೆ ನಿಮ್ಮ ಪ್ರಶ್ನೆಗೆ ಸಂಪೂರ್ಣ ಉತ್ತರ | Ayush Doctor