ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀ್ಕ್ಷೆಗೆ ಹಾಜರಾಗಬೇಕು. ಸೆ. 29 ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಇನ್ನು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆಗಸ್ಟ್ 26 ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು ಎಂದು ಹೇಳಿದ್ದಾರೆ.