ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವುದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ. ವಿಜ್ಞಾನಿಗಳು ಹಾಗೂ ಶಿಕ್ಷಕರು ಇದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ 830 ವಸತಿ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಟೆಲಿಸ್ಕೋಪ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ದೇಶದ ಅತಿ ದೊಡ್ಡ ವಿಜ್ಞಾನ ಗ್ಯಾಲರಿ ₹100 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಮೂಲಕ ಹೊಸ ಸಂಶೋಧನೆ ಮಾಡಬೇಕು. ಭವಿಷ್ಯದಲ್ಲಿ ದೇಶಕ್ಕೆ ಕೊಡುಗೆ ನೀಡುವ ಆಶಾಭಾವನೆ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ. ವಿಜ್ಞಾನಿಗಳು ಹಾಗೂ ಶಿಕ್ಷಕರು ಇದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ… pic.twitter.com/TRip4fhVS0
— DIPR Karnataka (@KarnatakaVarthe) August 21, 2024
ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಣೆ
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್