ಬೆಂಗಳೂರು: ಕೆಸೆಟ್-2024ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು ಎಂದಿದ್ದಾರೆ.
ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 28.08.2024
2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30.08.2024
ಸೂಚನೆ : ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 13.07.2024 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದ್ದಾರೆ.
ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟ್’ ಒಲವು: ‘5,000 ಉದ್ಯೋಗ’ ಸೃಷ್ಠಿ: ಸಚಿವ ಎಂ.ಬಿ ಪಾಟೀಲ್
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್