ಆಂಧ್ರಪ್ರದೇಶ : ಆಂಧ್ರಪ್ರದೇಶದ ಅಚ್ಚುತಪುರಂ ಸಮೀಪವಿರುವ ಕಂಪನಿ ಒಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು 15 ಜನರು ದಾರುಣವಾಗಿ ಸಾವನ್ನಪ್ಪಿದ್ದು, 31 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಆಂಧ್ರಪ್ರದೇಶದ ಅಚ್ಚುತಪುರಂ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಅಚ್ಚುತಪುರಂ ಸಮೀಪ ಇರುವ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡಿದೆ. ಈ ವೇಳೆ 15 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.ಈ ಒಂದು ಘಟನೆಯಲ್ಲಿ 31ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.