ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪವಿತ್ರಾಗೌಡ ಬದಲು ನಟ ದರ್ಶನ್ ರನ್ನು ನಂ.1 ಆರೋಪಿ ಎಂದು ಆರೋಪ ಪಟ್ಟಿ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧನದ ಬಳಿಕ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಎ1 ಆರೋಪಿ ಎಂದು, ದರ್ಶನ್ ರನ್ನು ಎ2 ಆರೋಪಿ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ ತನಿಖೆ ವೇಳೆ ಇಡೀ ಕೃತ್ಯದ ಸೂತ್ರಧಾರ ದರ್ಶನ್ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಇದೀಗ್ ದರ್ಶನ್ ರನ್ನು ಎ1 ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ್ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆರೋಪಿಗಳ ವಿವರವನ್ನು ಉಲ್ಲೇಖಿಸುವಾಗ ದರ್ಶನ್ ಅವರನ್ನು ಎ1 ಎಂದು ಪೊಲೀಸರು ಉಲ್ಲೇಖಿಸುವ ಸಾಧ್ಯತೆ ಎನ್ನಲಾಗಿದೆ.