ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.
ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.
ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು.