ಬೆಂಗಳೂರು : ಕನ್ನಡಿಗರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕದಲ್ಲಿ ‘ಬೆಸ್ಟೆಕ್’ಕಂಪನಿ 200 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ್,ತೈವಾನ್ನ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕಾ ಕಂಪನಿ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ರಾಜ್ಯದಲ್ಲಿ ₹200 ಕೋಟಿ ಬಂಡವಾಳ ಹೂಡಲು ಒಲವು ತೋರಿದೆ. ಇದರಿಂದಾಗಿ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಂಪನಿಯು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿಸಿದೆ. ಇದಕ್ಕೆ ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.