ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವೇಶ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಡಿಚ್ಚಿ ಮುಬಾರಕ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ಸಂಗಮೇಶ್ ಪುತ್ರ ಬಸವೇಶ ಕೊಲೆಗೆ ಜೈಲಿನಿಂದಲೇ ಸಂಚು ರೂಪಿಸಲಾಗಿ ಎಂಬ ಆರೋಪದ ಮೇಲೆ ಮುಬಾರಕ್ ಸೇರಿದಂತೆ ನಾಲ್ವರ ವಿರುದ್ಧ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ನಲ್ಲಿ ದಾಖಲಾಗಿದೆ.
ಡಿಚ್ಚಿ ಮುಬಾರಕ್ ಜೈಲಿನಿಂದ ಎರಡು ಪ್ರತ್ಯೇಕ ಫೋನ್ ನಂಬರ್ ನಿಂದ ಕರೆ ಮಾಡಿ ಬಸವೇಶನನ್ನು ಕೊಲ್ಲಲು ಡೀಲ್ ನಡೆದಿದೆ ಎಂದು ಹೇಳಿದ್ದಾನೆ ಎಂದು ಶಾಸಕರ ಆಪ್ತ ವ್ಯಕ್ತಿಯೊಬ್ಬರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.