ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದು, ಕಳೆದ 10 ವರ್ಷಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು, ನೀರಿನ ದರ ಮಾತ್ರ ಪರಿಷ್ಕರಣೆ ಮಾಡಿಲ್ಲ ಹೀಗಾಗಿ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಜಲಮಂಡಳಿಯ ಅದಾಯಕ್ಕಿಂತಲೂ ವೆಚ್ಚ ಹೆಚ್ಚಾಗಿದೆ. ಗೃಹ ಬಳಕೆ ನೀರಿನ ದರವನ್ನು ಶೇ. 30 ರಿಂದ 40 ಹಾಗೂ ವಾಣಿಜ್ಯ ಬಳಕೆಗೆ ಶೇ. 45 ರಷ್ಟು ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.