ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗೋಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗೋಗಿದೆ. ಗ್ಯಾರಂಟಿ ಯೋಜನೆಗಳಿಗೆ ಕೊಡಲು ದುಡ್ಡು ಸಹ ಇಲ್ಲವಾಗಿದೆ. ಮನಸೋ ಇಚ್ಚೇ ಮಾಡುತ್ತಿದೆ. ತುಘಲಕ್ ದರ್ಬಾರ್ ಮಾಡುತ್ತಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಬೆಂಗಳೂರು ಶಾಸಕರು, ಬಿಜೆಪಿಯಿಂದ ಪ್ರತಿಭಟನೆ ಮಾಡುತ್ತೇವೆ ಎಂದರು.