ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತವರನ್ನು ನೋಡಿಯೇ ‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಎನ್ನುವು ನಾಣ್ನುಡಿ ಬರೆದಂತೆ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ ಎಂದು ಹೇಳಿದೆ.