ಹಾಸನ : ಕಲ್ಕತ್ತಾದ ಟ್ರೈನಿ ವೈದ್ಯೇಯ ಮೇಲೆ ನಡೆದಿರುವ ಅತ್ಯಾಚಾರಕ್ಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಹೋರಾಟಗಳು ನಡೆಯುತ್ತಿರುವಾಗ ಇದೀಗ ರಾಜ್ಯದಲ್ಲಿ ಕೂಡ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದೀಗ ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ ನಡೆದಿದೆ. ಘಟನೆ ಖಂಡಿಸಿ ಹಾಸನದಲ್ಲಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಸನ ಡಿಸಿ ಕಚೇರಿದರು ಧರಣಿ ನಡೆಸಿ ಮನವಿ ಸಲ್ಲಿಕೆ ಮಾಡಲಾಗಿದೆ. ಆರೋಪಿ ವಿರುದ್ಧ ವಿರುದ್ದ ಕ್ಷಣ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿಬಂದಿದೆ.