ಹಾಸನ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಆಸನದ ಚನ್ನರಾಯಪಟ್ಟಣದ ಹಿರಿಸಾವೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕನೊಬ್ಬ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದ್ದು, ಸದ್ಯ ಆರೋಪಿ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಘಟನೆ ಖಂಡಿಸಿ ಹಾಸನದ ಜಿಲ್ಲಾಧಿಕಾರಿ ಕಚೇರಿ ಸಾರ್ವಜನಿಕರು ಧರಣಿ ನಡೆಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 10 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ವೃದ್ದನೋರ್ವ ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಆಸಿಫ್ ಭಾಗವಾನ ಎಂಬಾತ ಈ ಕೃತ್ಯ ಎಸಗಿದ್ದಾನೆ.
ಸದ್ಯ ಆರೋಪಿಯನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.