ಬೆಳಗಾವಿ : ಇಡೀ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು. ಲೈಂಗಿಕ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಅದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಡೆಸಿದರು ಈ ಒಂದು ಅತ್ಯಾಚಾರ ಘಟನೆಗಳು ನಿಲ್ಲುತ್ತಿಲ್ಲ. ಇದೀಗ ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ 10 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಹೌದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.10 ರೂಪಾಯಿ ಚಾಕ್ಲೆಟ್ ಆಸೆ ತೋರಿಸಿ ವೃದ್ಧನು ಬಾಲಕಿಯ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯೂ ಪೋಷಕರಿಗೆ ತಿಳಿಸಿದ್ದಾಳೆ. ಆಗಸ್ಟ್ 18ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ವೃದ್ಧನನ್ನು ಬಂಧಿಸಿದ್ದಾರೆ.