ಬೆಂಗಳೂರು: ಬಿಡಬ್ಲ್ಯೂ ಎಸ್ ಎಸ್ ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.
“ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಹೆಚ್ ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗಲೂ ಈ ಬಗ್ಗೆ ದೊಡ್ಡ ಚರ್ಚೆಯಾಯಿತು” ಎಂದರು.
“ಸದನದಲ್ಲಿ ನಾಣಯ್ಯನವರು ವ್ಯಾಪಕವಾಗಿ ಚರ್ಚೆ ಮಾಡಿದರು. ಆಗ ಎಸ್.ಎಂ. ಕೃಷ್ಣ ಅವರು ನನ್ನನ್ನು ಹೊರದೇಶಕ್ಕೆ ಕಳುಹಿಸಿ ನೀರು ಸರಬರಾಜನ್ನು ಖಾಸಗಿಕರಣದ ಬಗ್ಗೆ ಅಧ್ಯಯನ ಮಾಡುವಂತೆ ತಿಳಿಸಿದ್ದರು. ನಾನು ಫ್ರ್ಯಾನ್ಸ್ ಹಾಗೂ ಇತರ ದೇಶಗಳಿಗೆ ಹೋಗಿದ್ದೆ. ಅಲ್ಲಿ ಒಂದು ಪದ್ಧತಿಯಲ್ಲಿ ಮಾಡುತ್ತಿದ್ದಾರೆ. ನಮ್ಮಲ್ಲಿರುವ ಬಿಡಬ್ಲ್ಯೂ ಎಸ್ ಎಸ್ ಬಿ ಎಂಜಿನಿಯರ್ ಗಳು ಹೊರದೇಶದಲ್ಲಿರುವ ಎಂಜಿನಿಯರ್ ಗಳಿಗಿಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಸ್.ಎಂ.ಕೃಷ್ಣ ಅವರಿಗೆ ಹೇಳಿದೆ. ಅಲ್ಲಿಂದ ಬಂದವರು ನಮ್ಮವರ ಬಳಿಯೇ ಕೆಲಸ ಮಾಡಿಸುತ್ತಾರೆ. ನೀರಿನ ಪೈಪ್ ಲೈನ್ ಬದಲಾಯಿಸಿ ಹೊಸ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿ ಶೇ 30 ರಷ್ಟು ಹೆಚ್ಚು ವೆಚ್ಚ ಕೇಳುತ್ತಾರೆ. ಆ ವ್ಯವಸ್ಥೆ ನಮ್ಮ ರಾಜ್ಯಕ್ಕೆ ಅನುಕೂಲಕರವಾಗಿಲ್ಲ. ದೆಹಲಿ, ಮುಂಬೈಗೆ ಸೂಕ್ತವಾಗಿದೆ ಎಂದು ವರದಿ ನೀಡಿದೆ. ಖಾಸಗೀಕರಣದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾದ ಕಾರಣಕ್ಕೆ ಪ್ರಸ್ತಾವನೆ ಕೈ ಬಿಡಲಾಯಿತು” ಎಂದು ತಿಳಿಸಿದರು.
BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!
BIG NEWS: ಬೆಂಗಳೂರಲ್ಲಿ ಯಾರೇ ವಿರೋಧ ಮಾಡಿದರೂ ‘ನೀರಿನ ದರ ಏರಿಕೆ’: ಡಿಸಿಎಂ ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ: BJP MLC ಛಲವಾದಿ ನಾರಾಯಣಸ್ವಾಮಿ