ಬೆಂಗಳೂರು: ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಹೀಗಿದ್ದೂ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗ ರಾಜ್ಯಪಾಲರಿಗೆ ಬಾಕಿ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಸಲಹೆ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಬಾಕಿ ಇರುವ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಸಲಹೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ನಾಯಕರ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
Sensex Today: ಚೇತರಿಕೆ ಕಂಡ ಶೇರು ಮಾರುಕಟ್ಟೆ: ನಿಫ್ಟಿ 24,800 ಅಂಕ ಏರಿಕೆ, ಸೆನ್ಸೆಕ್ಸ್ 148 ಅಂಕ ಜಿಗಿತ
ನಾನಿರುವ ತನಕ ‘BWSSB ಖಾಸಗೀಕರಣ’ಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್