ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಹಾಗೂ ರಾಜ್ಯದ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸವಿನೆಡೆಯಿತು ಸಭೆಯ ಬಳಿಕ ರಾಜ್ಯ ಸರ್ಕಾರ ಹಾಗೂ ಚಂಪಿದ್ರಾಮಯ್ಯ ವಿರುದ್ಧ ಷಡ್ಯಂತರ ನಡೆಯುತ್ತಿದೆ ಎಂದು ಶಿವಕುಮಾರ್ ಗಂಭೀರ ಆರೋಪ ಮಾಡಿದರು.
ಶಾಸಕಾಂಗ ಪಕ್ಷದ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಶಾಸಕಾಂಗ ಸಭೆಯಲ್ಲಿ ಬಹಳ ವಿಷಯ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಸರ್ವಾನುಮತದಿಂದ ಶಾಸಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಾಸಕ ಆರ್.ವಿ ದೇಶಪಾಂಡೆ ಸೂಚಿಸಿ ತನ್ವೀರ್ ಸೇಠ್ ಅನುಮೋದಿಸಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯಪಾಲರು ಸರಿಯಾದ ತನಿಖೆ ನಡೆಸದೆ ಪ್ರಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ. ಸರ್ಕಾರವನ್ನು ಅಭದ್ರ ಗೊಳಿಸಲು ತೊಂದರೆ ಕೊಡುತ್ತಿದ್ದಾರೆ. ಆದರೆ ನಮ್ಮ ಸರಕಾರಕ್ಕೆ ಯಾರು ಏನು ಮಾಡಲು ಸಾಧ್ಯವಿಲ್ಲ. ನಾವೆಲ್ಲ ಗಟ್ಟಿಯಾಗಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ ಎಂದರು.
ಹೈಕಮಾಂಡ್ ನಾಯಕರ ಬೇಟಿಗೆ ನಾಳೆ ದೆಹಲಿಗೆ ತೆರಳುತ್ತಿದ್ದೇವೆ. ಹೈಕಮಾಂಡ್ ನಾಯಕರು ನಮ್ಮನ್ನು ಕರೆದಿಲ್ಲ ನಾವೇ ಹೋಗುತ್ತಿದ್ದೇವೆ.ಎಲ್ಲ ವಿಚಾರಗಳನ್ನು ನಾವು ಹೈಕಮಾಂಡ್ ಮುಂದೆ ತಿಳಿಸುತ್ತೇವೆ. ಶಾಸಕಾಂಗ ಸಭೆಯಲ್ಲಿ ಬಹಳಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.