ಬೆಂಗಳೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ 8 ಲಕ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ. 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/7899899039 ಅಥವಾ ಆಯಾ ಜಿಲ್ಲೆಗಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವAತೆ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ತಿಳಿಸಿದೆ.ಸರ್ಕಾರವು 2024ರ ಆಗಸ್ಟ್-31 ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಗಡುವು ನೀಡಿರುತ್ತದೆ. ಆದ್ದರಿಂದ ಇ-ಕೆವೈಸಿ ಬಾಕಿ ಇರುವ ಪಡಿತರ ಚೀಟಿಗಳ ಸದಸ್ಯರು ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ.